ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಅಭಿವೃದ್ಧಿಗೆ ಒಡಂಬಡಿಕೆ
ಉಡುಪಿ: ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡುವೆ ರಾಜ್ಯದಲ್ಲೇ ಮೊದಲ ಬಾರಿಗೆ ಒಡಂಬಡಿಕೆ ನಡೆಯಿತು. ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ […]
ಲಿಕ್ವಿಡ್ ನೈಟ್ರೋಜನ್ ಸಂಶೋಧನೆಗೆ ಸಹಕಾರ: ನಿಟ್ಟೆ ಹಾಗೂ ಇಲೈಟ್ ಇಂಡಸ್ಟ್ರೀಸ್ ನಡುವೆ ಒಪ್ಪಂದ
ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಇಲೈಟ್ ಇಂಡಸ್ಟ್ರೀಸ್ ಗ್ರೂಪ್ ಆಫ್ ಕಂಪೆನೀಸ್, ದಮನ್ & ಡಿಯು ನ ನಡುವಿನ ಶೈಕ್ಷಣಿಕ ಒಪ್ಪಂದಕ್ಕೆ ಸಹಿ ಹಾಕುವ ಹಾಗೂ ಹಸ್ತಾಂತರ ಮಾಡುವ ಕಾರ್ಯಕ್ರಮವು ಜು.12 ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಿತು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್.ಚಿಪ್ಳೂಣ್ಕರ್ ಹಾಗೂ ಇಲೈಟ್ ಇಂಡಸ್ಟ್ರೀಸ್ ಸಂಸ್ಥೆಯ ಸಿ.ಇ.ಒ ದಿನೇಶ್ ಶೆಟ್ಟಿ ಒಪ್ಪಂದದಕ್ಕೆ ಸಹಿ ಹಾಕಿದರು. ಮೆಕ್ಯಾನಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ.ಉದಯ್, ಇಲೈಟ್ ಸಂಸ್ಥೆಯೊಂದಿಗಿನ […]
ಶಾಲಾ ಆರೋಗ್ಯ ಕಾರ್ಯಕ್ರಮ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನಡುವೆ ಒಪ್ಪಂದ
ಮಣಿಪಾಲ: ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಮತ್ತು ಉಡುಪಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವೆ ಜೂನ್ 2 ರಂದು ಶಾಲಾ ಆರೋಗ್ಯ ಕಾರ್ಯಕ್ರಮದಡಿ ಉಡುಪಿಯ ಮಕ್ಕಳಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಾಗಿ ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಇದರ ಅಡಿಯಲ್ಲಿ ವಿಶೇಷ ಅಗತ್ಯವಿರುವ ಮಕ್ಕಳಿಗಾಗಿ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗಿರುವ ತರಬೇತಿ ಕೇಂದ್ರದ ಸರ್ವತೋಮುಖ ಸುಧಾರಣೆಯನ್ನು ಕೈಗೊಳ್ಳಲು ಬಯಸಿದ್ದು, ಮಣಿಪಾಲ ಕಾಲೇಜ್ ಆಫ್ ಹೆಲ್ತ್ […]