ಕ್ಯಾಪ್ಟನ್ ಮಿಲ್ಲರ್’ ಟೀಸರ್ ಧನುಷ್ ಜನ್ಮದಿನಕ್ಕೆ ‘ ಗಿಫ್ಟ್
ದಕ್ಷಿಣ ಚಿತ್ರರಂಗದ ಹೆಸರಾಂತ ನಟ ಧನುಷ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. 40ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ಗೆ ಕುಟುಂಬ ಸದಸ್ಯರು, ಆಪ್ತರು, ಸಿನಿಮಾ ಇಂಡಸ್ಟ್ರಿಯ ಸ್ನೇಹಿತರೂ ಸೇರಿದಂತೆ ಕೋಟ್ಯಂತರ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.ಕಾಲಿವುಡ್ ಸೂಪರ್ ಸ್ಟಾರ್ ಧನುಷ್ ಜನ್ಮದಿನ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ. ‘ಕ್ಯಾಪ್ಟನ್ ಮಿಲ್ಲರ್ ಟೀಸರ್’ ಬಿಡುಗಡೆ: ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು ನಿರ್ದೇಶಕ ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಮತ್ತು ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವ […]