ರಾಮ್​ಚರಣ್​ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ : ಪ್ರಜ್ವಲ ಫೌಂಡೇಶನ್ ನಿಂದ ತೊಟ್ಟಿಲು ಉಡುಗೊರೆ

ಸೌತ್​ನ ಮೆಗಾ ದಂಪತಿ ರಾಮ್ ಚರಣ್ ಮತ್ತು ಉಪಾಸನಾ ಕೊನಿಡೇಲಾ ಶೀಘ್ರದಲ್ಲೇ ಪೋಷಕರಾಗಿ ಬಡ್ತಿ ಪಡೆಯಲಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟ ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಪ್ರಜ್ವಲ ಫೌಂಡೇಶನ್ ವತಿಯಿಂದ ಸುಂದರ ತೊಟ್ಟಿಲನ್ನು ಉಡುಗೊರೆಯಾಗಿ ಪಡೆದಿದ್ದಾರೆ. ಮದುವೆಯಾಗಿ 10 ವರ್ಷಗಳ ಬಳಿಕ ದಂಪತಿ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ. ಇದಕ್ಕಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಗರ್ಭಾವಸ್ಥೆಯ ಕ್ಷಣಗಳನ್ನು ಆನಂದಿಸುತ್ತಿರುವ ಈ ಜೋಡಿಗೆ ವಿಶೇಷ ಉಡುಗೊರೆಯೊಂದು ಸಿಕ್ಕಿದೆ. ಹುಟ್ಟುವ ಮಗುವಿಗೆ ಪ್ರಜ್ವಲ ಫೌಂಡೇಶನ್ ಸುಂದರವಾದ […]