ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ 2 ಲಕ್ಷ ರೂ ಘೋಷಣೆ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ
ಬೆಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 2 ಲಕ್ಷ ರೂ ನೀಡುವುದಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಘೋಷಣೆ ಮಾಡಿದ್ದಾರೆ. ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಮಾತನಾಡಿ, ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದ್ದು, ಆತನ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. “ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನೇ ಕಳೆದುಕೊಂಡಂತಾಗಿದೆ. ನಾನು ಅವರ ಕುಟುಂಬದ ಜೊತೆಗಿದ್ದೇನೆ. ಆತನ ಕುಟುಂಬಕ್ಕೆ 2 ಲಕ್ಷ ರೂ ನೀಡುತ್ತಿದ್ದೇನೆ”. ಎಂದು ಶಾಸಕ ಘೋಷಣೆ […]