ಕಾಫಿ ಬೆಳೆಗಾರರ ಸಂಕಷ್ಟ ಪರಿಹರಿಸುವಂತೆ ವಿತ್ತ ಸಚಿವರಿಗೆ ಮನವಿ ಸಲ್ಲಿಸಿದ ಸಂಸದೆ ಶೋಭಾ ಕರಂದ್ಲಾಜೆ

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ಹವಾಮಾನ ವೈಪರೀತ್ಯದಿಂದ ತೀವ್ರತರದ ಸಂಕಷ್ಟದಲ್ಲಿರುವ ರಾಜ್ಯದ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿಯಾಗಿ ಮನದಟ್ಟು ಮಾಡಿದರು. ಕಳೆದ ಕೆಲವು ವರ್ಷಗಳಿಂದ ಮಲೆನಾಡಿನ ಕಾಫಿ ಬೆಳೆಗಾರರು ನಿತ್ಯವೂ ಅತಿವೃಷ್ಟಿ, ಅನಾವೃಷ್ಟಿ, ಕಾರ್ಮಿಕರ ಸಮಸ್ಯೆ, ಬೆಳೆಗೆ ತಕ್ಕ ಬೆಲೆ ಇಲ್ಲದಿರುವುದು ಸೇರಿದಂತೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಲೇ ಬಂದಿದ್ದಾರೆ. ಅತಿವೃಷ್ಟಿ, ರೋಗಬಾಧೆ ಮುಂತಾದ ಸಮಸ್ಯೆಗಳಿಂದ ಬಸವಳಿದ ಕಾಫಿ […]