ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ
ಉಡುಪಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ.ಟಿ. ರವಿ ಹಾಗೂ ರಾಷ್ಟ್ರೀಯ ವಕ್ತಾರರಾಗಿ ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ನೇಮಕಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕರ್ನಾಟಕದಿಂದ ಈ ಮೂವರು ನಾಯಕರಿಗೆ ಪಕ್ಷದ ಮಹತ್ವದ ಜವಾಬ್ದಾರಿಯನ್ನು ನೀಡಿ ಆದೇಶ ಹೊರಡಿಸಿದ್ದಾರೆ.