ಕಾಂಗ್ರೆಸ್ ಉಳಿಸಲು ಈ ನಿರ್ಧಾರ: ಗೆದ್ದು ರಾಜಧರ್ಮ ಪಾಲಿಸುತ್ತೇನೆ: ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಮೈತ್ರಿ ಧರ್ಮದಂತೆ ಜೆಡಿಎಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಚಿವ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು. ಶುಕ್ರವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮನೆಗೆ ಹೋಗುವ ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದರು. ಮಾರ್ಚ್ 25 ಕ್ಕೆ ನಾಮಪತ್ರ […]
ಕಾಂಗ್ರೆಸ್-ಜೆಡಿಎಸ್ ಚಿಹ್ನೆಯ ಶಾಲು ಧರಿಸಿ ಗಮನ ಸೆಳೆದ ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್-ಜೆಡಿಎಸ್ಚಿ ಹ್ನೆಯುಳ್ಳ ಶಾಲು ಧರಿಸಿ ಗಮನ ಸೆಳೆದರು. ಶುಕ್ರವಾರ ಜೆಡಿಎಸ್ ಬಿ ಫಾರಂ ಪಡೆದುಕೊಂಡು ತವರಿಗೆ ಆಗಮಿಸಿದ ಅವರು ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಒಂದೇ ಶಾಲಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡು ಪಕ್ಷದ ಚಿಹ್ನೆ ಮುದ್ರಿಸಿಕೊಂಡಿರುವರುವ ಪ್ರಮೋದ್, ಇಂತಹ ಶಾಲು ಈವರೆಗೆ ಯಾರೂ ತಯಾರು ಮಾಡಿಲ್ಲ. ಈ ಶಾಲನ್ನು 18 ರ ವರೆಗೆ ತೊಟ್ಟಿರುತ್ತೇನೆ. ಚಿಹ್ನೆಯ ಬಗ್ಗೆ ಜನರಿಗೆ ಉತ್ತರ […]
ಕಾಂಗ್ರೆಸ್ ಗೆ ದೇಶದ ರಕ್ಷಣೆಗಿಂತ ಸ್ವಾರ್ಥ ಸಾಧನೆ ಹೆಚ್ಚು: ಸಂಸದೆ ಮೀನಾಕ್ಷಿ ಲೇಖಿ ಆರೋಪ

ಉಡುಪಿ: ಭಾರತೀಯ ಸೇನೆ ಇರುವುದು ದೇಶದ ರಕ್ಷಣೆಗೆ. ಅದನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ ಕೆಲವರು (ಕಾಂಗ್ರೆಸ್ ನವರು) ಭಯೋತ್ಪಾದಕರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದರೂ ಸಾಕ್ಷಿ ಕೇಳುತ್ತಾರೆ. ಅವರಿಗೆ ದೇಶದ ರಕ್ಷಣೆಗಿಂತ ಹೆಚ್ಚಾಗಿ ಸ್ವಾರ್ಥ ಸಾಧನೆಯೇ ಹೆಚ್ಚಾಗಿದೆ ಎಂದು ಸಂಸದೆ ಮೀನಾಕ್ಷಿ ಲೇಖಿ ಟೀಕಿಸಿದರು. ನಮೋ ಭಾರತ್ ವತಿಯಿಂದ ಭಾನುವಾರ ಮಲ್ಪೆ ಬೀಚ್‌ನಲ್ಲಿ ಹಮ್ಮಿಕೊಂಡಿದ್ದ ಪಾಂಚಜನ್ಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಗೆ ದೇಶದ ರಕ್ಷಣೆ ಮುಖವಲ್ಲ. ದೇಶವನ್ನು ಮತ್ತೆ ಲೂಟಿ ಹೊಡೆದು, ಕುಟುಂಬದ ರಕ್ಷಣೆ ಮಾಡಿಕೊಳ್ಳಬೇಕಿದೆ. ಹಾಗಾಗಿ ಅವರು ಮಹಾಘಟ್ […]