ಜೆಪ್ಪು ಮಾರ್ಕೇಟ್ – ಎಂಪಾಸಿಸ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪು ಮಾರ್ಕೇಟ್ – ಎಂಪಾಸಿಸ್ ನಡುವಿನ ರಸ್ತೆ ಕಾಂಕ್ರೀಟೀಕರಣದ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯರು ಗುದ್ದಲಿಪೂಜೆ ನಡೆಯಿತು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಮಂಗಳೂರಿನ ಯಾವ ಭಾಗವೂ ಕೂಡ ಅಭಿವೃದ್ಧಿಯ ವಿಚಾರದಲ್ಲಿ ಹಿಂದುಳಿಯಬಾರದು‌. ಗುಜ್ಜರಕೆರೆಯ ಸಾರ್ವಜನಿಕರು ರಸ್ತೆ ಅಭಿವೃದ್ಧಿಗೊಳಿಸುವಂತೆ ಕೋರಿಕೊಂಡಿದ್ದರು. ಈಗ 80 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದೆ ಎಂದರು. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಮಸ್ಯೆಗಳಾಗಬಹುದು ಆದರೆ ಅಭಿವೃದ್ಧಿಯ ದೃಷ್ಟಿಯಿಂದ […]