ಯಕ್ಷಗಾನ ಕಲೆಯ ಅಂಚೆ ಚೀಟಿ ಬಿಡುಗಡೆ: ದೈವಾರಾಧನೆಯ ಅಂಚೆ ಚೀಟಿ ಬಿಡುಗಡೆಗೂ ಪ್ರಯತ್ನ
ಮಂಗಳೂರು: ಅಂಚೆ ಇಲಾಖೆಯು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಹಯೋಗದಲ್ಲಿ ಹೊರತಂದಿರುವ ಯಕ್ಷಗಾನದ (Yakshagana) ಅಂಚೆಚೀಟಿ ಬಿಡುಗಡೆಗೊಳಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಈ ಹಿಂದೆ ಉಳ್ಳಾಲದ ರಾಣಿ ಅಬ್ಬಕ್ಕ ಕುರಿತ ಅಂಚೆ ಚೀಟಿ ಬಿಡುಗಡೆಯಾಗಿತ್ತು. ಅದನ್ನು ಹೊರತುಪಡಿಸಿದರೆ ಕರಾವಳಿಯ ಸಂಸ್ಕೃತಿ ಹಾಗೂ ಜನಜೀವನ ಬಿಂಬಿಸುವ ಅಂಚೆ ಚೀಟಿಗಳು ವಿರಳ. ಯಕ್ಷಗಾನದ ಅಂಚೆ ಚೀಟಿ ಬಿಡುಗಡೆಗೊಳಿಸುವಂತೆ 2019ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. ಇಂತಹ ಪ್ರಸ್ತಾವಗಳನ್ನು ಪರಿಶೀಲಿಸಿ ಮಂಜೂರಾತಿ ಅಂಚೆ ಚೀಟಿ ಸಲಹಾ ಸಮಿತಿ ವರ್ಷಕ್ಕೊಮ್ಮೆ […]
ಇಂಡಿಯನ್ ಆಯಿಲ್ ಹಾಗೂ ಎಂಆರ್‌ಪಿಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (IOCL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಮೆಕ್ಯಾನಿಕಲ್, ಇಲೆಕ್ಟ್ರೀಷಿಯನ್, ಇನ್‌ಸ್ಟ್ರುಮೆಂಟೇಷನ್, ಸಿವಿಲ್, ಫಿಟ್ಟರ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಮಷಿನಿಸ್ಟ್, ಡಾಟಾ ಎಂಟ್ರಿ ಆಪರೇಟರ್, ಹೀಗೆ ಹಲವು ವಿಭಾಗಗಳಲ್ಲಿ ತರಬೇತಿಗೆ ಅಭ್ಯರ್ಥಿಗಳನ್ನು ನಿಯೋಜಿಸಲಾಗುತ್ತದೆ. ರಾಜ್ಯ ಹಾಗೂ ಟ್ರೇಡ್ / ಟೆಕ್ನೀಷಿಯನ್ / ಗ್ರಾಜುಯೇಟ್‌ವಾರು ಹುದ್ದೆಗಳ ಸಂಖ್ಯೆಗಳನ್ನು ಕೆಳಗಿನ ನೋಟಿಫಿಕೇಶನ್‌ನಲ್ಲಿ ಓದಿ ತಿಳಿಯಬಹುದು. […]
ಪಂಚೆ ಉಟ್ಟು ಮುಂಡಾಸು ಕಟ್ಟಿ ಕಾಂತಾರ ವೀಕ್ಷಿಸಿದ ಎಂ.ಆರ್.ಪಿ.ಎಲ್ ಉದ್ಯೋಗಿಗಳು!
ಮಂಗಳೂರು: ತುಳುವ ನಾಡಿನ ಸೊಗಡನ್ನು ಹೊಂದಿರುವ ಕಾಂತಾರ ಸೃಷ್ಟಿಸಿದ ಸಂಚಲನ ಹೇಗಿದೆಯೆಂದರೆ ಇದೀಗ ವಿಶ್ವವೆ ತುಳುವ ಸಂಸ್ಕೃತಿಯ ಬಗ್ಗೆ ಮಾತನಾಡುತ್ತಿದೆ ಮಾತ್ರವಲ್ಲ, ಇಲ್ಲಿನ ಆಚಾರ ವಿಚಾರಗಳನ್ನು ತಿಳಿದುಕೊಳ್ಳುವತ್ತ ಮುಖ ಮಾಡಿದೆ. ಇದೀಗ ಎಂ.ಆರ್.ಪಿ.ಎಲ್ ನ ಉದ್ಯೋಗಿಗಳು ಪಂಚೆ ಉಟ್ಟುಕೊಂಡು ಎರಡನೇ ಬಾರಿಗೆ ಚಲನಚಿತ್ರ ವೀಕ್ಷಣೆಗೆ ಹೊರಟಿದ್ದು, ಇದು ಈ ಸಿನಿಮಾ ಮತ್ತು ಈ ಮಣ್ಣಿನ ಸಂಸ್ಕೃತಿಯ ಬಗ್ಗೆ ಈ ಯುವಕರಿಗಿರುವ ಅಭಿಮಾನವನ್ನು ಎತ್ತಿ ತೋರಿಸುತ್ತಿದೆ. ಮೊದಲನೆ ಬಾರಿಗೆ ಕಾಂತಾರ ಚಲನಚಿತ್ರವನ್ನು ಕಂಡು ಖುಷಿಪಟ್ಟ ಈ ಯುವಕರ ತಂಡವು […]
ದೇಶದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ
ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿಸ್ವದೇಶಿ ವಿನ್ಯಾಸ ಮತ್ತು ನಿರ್ಮಿತ ಮೊದಲ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಗೆ ಚಾಲನೆ ನೀಡಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಕಚೇರಿಯಿಂದ ವಿನ್ಯಾಸಗೊಳಿಸಲ್ಪಟ್ಟಿರುವ ಮತ್ತು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟಿರುವ ಐ.ಎನ್.ಎಸ್ ವಿಕ್ರಾಂತ್ ಅನ್ನು ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲಾಗಿದೆ ಮತ್ತು ಇದು ಭಾರತದ ಕಡಲ ಇತಿಹಾಸದಲ್ಲಿ ಇದುವರೆಗೆ ನಿರ್ಮಿಸಲಾದ ಅತಿದೊಡ್ಡ ಹಡಗಾಗಿದೆ. ವಿಕ್ರಾಂತ್ ಕಾರ್ಯಾರಂಭದೊಂದಿಗೆ, ಭಾರತವು ಎರಡು ಕಾರ್ಯಾಚರಣೆಯ […]