ಮಿಸೆಸ್ ಯೂನಿವರ್ಸಲ್‌ ಗೆ ಉಡುಪಿಯ ಡಾ.ಪದ್ಮಾ ಗಡಿಯಾರ್ ಆಯ್ಕೆ

ಉಡುಪಿ : ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಮಹಿಳೆಯೊಬ್ಬರು ಮಿಸೆಸ್ ಯೂನಿವರ್ಸಲ್‌ಗೆ ಪ್ರವೇಶ ಪಡೆದು ಗಮನ ಸೆಳೆದಿದ್ದಾರೆ. ಉಡುಪಿ ತೆಂಕಪೇಟೆಯ ಅರುಣ್ ಶೆಣೈ-ಅರ್ಚನಾ ಶೆಣೈ ದಂಪತಿ ಪುತ್ರಿ ಡಾ.ಪದ್ಮಾ ಗಡಿಯಾರ್ ಬ್ರಿಸ್ಬೇನ್‌ನಲ್ಲಿ 2018 ಅಕ್ಟೋಬರ್ ತಿಂಗಳಲ್ಲಿ ಯು.ಎಸ್. ಮೂಲದ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸಸ್ ಸೌತ್ ಇಂಡಿಯಾ ಯೂನಿವರ್ಸಲ್ ಕಿರೀಟ ಗೆದ್ದಿದ್ದರು.ಇದೀಗ ಇದೇ ಬರುವ ಆಗಸ್ಟ್‌ನಲ್ಲಿ ಮೆಕ್ಸಿಕೊದಲ್ಲಿ ಮಿಸೆಸ್ ಯೂನಿವರ್ಸಲ್ […]