ಮೂಡುಬಿದಿರೆ: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಮೂಡುಬಿದಿರೆ: ಪತಿಯೇ ಪತ್ನಿಯನ್ನು ಮಾರಕಾಯುಧದಿಂದ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಹತ್ಯೆಗೈದ ಆರೋಪಿಯನ್ನು ಮೂಡುಬಿದಿರೆಯ ಧರೆಗುಡ್ಡೆಯ ದಿನರಾಜ್ ಎಂದು ಗುರುತಿಸಲಾಗಿದೆ. ಈತ ಪತ್ನಿಯನ್ನು ಮೂಡಬಿದಿರೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ತನ್ನ ಪತ್ನಿ ಮನೆಯ ಮೆಟ್ಟಲಿನಿಂದ ಜಾರಿ ಬಿದ್ದು ಗಾಯಗೊಂಡಿದ್ದಾಳೆ ಎಂದು ಹೇಳಿದ್ದನು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಖಾಸಗಿ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಸುನಿತಾ ಸಾವನ್ನಪ್ಪಿದ್ದು, ಮೃತದೇಹವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸುನಿತಾ […]