ಉಡುಪಿ: ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಕೊಳಲನೂದುತ ಬಂದ ಮುದ್ದು ಕೃಷ್ಣರು
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥಪೀಠಮ್ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಅಂಗವಾಗಿ ರಾಜಾಂಗಣ, ಅನ್ನಬ್ರಹ್ಮ,ಭೋಜನಶಾಲೆಯಲ್ಲಿ ನಡೆದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ವೀಕ್ಷಿಸಿ ಮುದ್ದುಕೃಷ್ಣ.ಬಾಲಕೃಷ್ಣ ,ಕಿಶೋರಕೃಷ್ಣರನ್ನು ಅನುಗ್ರಹಿಸಿದರು. ಸುಮಾರು 500ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.