ಮೂಡುಬಿದಿರೆ:ಡಿಸೆಂಬರ್ 10 ರಿಂದ 15 ರವರೆಗೆ 06 ದಿನಗಳ 30ನೇ ವರ್ಷದ ಆಳ್ವಾಸ್ ವಿರಾಸತ್–2024 ಸಾರ್ವಜನಿಕರಿಗೆ ಸಂಪೂರ್ಣ ಉಚಿತ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30 ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ‘ಆಳ್ವಾಸ್ ವಿರಾಸತ್ 2024 ’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ […]