ಮೂಡುಬಿದಿರೆ: ಆಳ್ವಾಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ‘ಸಿಎ’ ಕೌನ್ಸೆಲಿಂಗ್ ಪ್ರೋಗ್ರಾಮ್

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಐ.ಸಿ.ಎ.ಐ ಮಂಗಳೂರು ಚಾಪ್ಟರ್ ವತಿಯಿಂದ ಆಳ್ವಾಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಎ ವೃತ್ತಿಯ ಕುರಿತು ಮಾಹಿತಿ ಕಾರ್ಯಕ್ರಮ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ- ಇತ್ತೀಚಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಇಲ್ಲವೇ ತಾಂತ್ರಿಕ ಪದವಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ, ಆದರೆ ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೂರಾರು ದಾರಿಗಳಿವೆ. ಅದನ್ನು ಅವರು ಅರಿತುಕೊಳ್ಳಬೇಕು […]