ಮೂಡುಬಿದಿರೆ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಬಾಲಕ- ಬಾಲಕಿಯರ ಕಬಡ್ಡಿ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಮೂಡುಬಿದಿರೆಯ ಹೋಲಿರೋಸರಿ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಶನಿವಾರ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಹೋಲಿರೋಸರಿ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನುಪಡೆಯಿತು.