ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 7 ಮತ್ತು 8ರಂದು ‘ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಜೂ. 7 ಮತ್ತು 8ರಂದು ʼಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’ ನಡೆಯಲಿದ್ದು, 20 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಐಟಿ ವಲಯ, ಉತ್ಪಾದನಾ ವಲಯ, ಬಿಎಫ್‌ಎಸ್‌ಐ, ಐಟಿಇಎಸ್‌, ಫಾರ್ಮಾ, ಆರೋಗ್ಯ, ಮಾರಾಟ, ಮಾಧ್ಯಮ, ನಿರ್ಮಾಣ, ಹಾಸ್ಪಿಟಾಲಿಟಿ ವಲಯದ ಕಂಪನಿಗಳು ಭಾಗವಹಿಸಲಿವೆ. ರಾಜ್ಯದವರ ಜತೆಗೆ ಹೊರ ರಾಜ್ಯದವರೂ ಭಾಗವಹಿಸಲಿದ್ದಾರೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಳೆದ 13 ಆಳ್ವಾಸ್‌ ಪ್ರಗತಿ […]