ಅವಕಾಶ ದೊರೆತಾಗ ಊರು, ದೇಶ, ಭಾಷೆ ಮರೆಯಬಾರದು: ಡಾ. ಎಂ ಮೋಹನ ಆಳ್ವ

ಮೂಡುಬಿದಿರೆ: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ ಅಂಕುರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]