ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‍ನ ಪದಕ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮೂಡುಬಿದಿರೆ: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತ, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‍ನ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮಂಗಳವಾರ ವಿದ್ಯಾಗಿರಿಯಲ್ಲಿ ಅಭಿನಂದಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‍ನ ಗೌರವಾಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ, ನಮ್ಮ ದೇಶದಲ್ಲಿ ಪರಿಚಿತ ಆಟವಾಗಿ, ಆದರೆ ಈ ಭಾಗದಲ್ಲಿ ಅಷ್ಟೊಂದು ಖ್ಯಾತಿಗೆ ಬಾರದ ಕ್ರೀಡೆಯನ್ನು, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್, ಕಳೆದ ಐದು ವರ್ಷಗಳ […]