ಪದವಿಪೂರ್ವ ಕಾಲೇಜುಗಳ ಮೂಡುಬಿದಿರೆ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಆಳ್ವಾಸ್‌ಗೆ ಅವಳಿ ಪ್ರಶಸ್ತಿ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಸೋಮವಾರ ನಡೆದತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು 2-0 ಅಂತರದಿಂದಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜಿನ ತಂಡವನ್ನು 2-1 ಅಂತರದಿಂದ ಸೋಲಿಸಿಪ್ರಶಸ್ತಿಯನ್ನು ಪಡೆಯಿತು.