ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನದ ಮಾನ್ಯತೆ (ಅಟೋನೋಮಸ್)
ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, 2034-35ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವೈಶಿಷ್ಟ್ಯಗಳು:‘ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ನ್ಯಾಕ್‍ನ ಮೊದಲ ಸೈಕಲ್ ನಲ್ಲೇ A+ […]