ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ.

ಮೂಡುಬಿದಿರೆ: ವ್ಯಕ್ತಿತ್ವ ರಚನಾ ವ್ಯವಸ್ಥೆಯೇ ಶಿಸ್ತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತನ್ನು ಅಳವಡಿಸಲು ಕಲಿಸುತ್ತದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗುಬ್ಬಿಗೂಡು ರಮೇಶ್ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗಿತ್ವದಲ್ಲಿ ೩೦ ನೇ ಆಳ್ವಾಸ್ ವಿರಾಸತ್ ಸಂಧರ್ಭದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್-ರೇಂಜರ್ಸ್ […]