ಪ್ರಕೃತಿ ಚಿಕಿತ್ಸೆ-ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಮಿಜಾರು ಶೋಭಾವನದ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಬಾರಿಯ ಯೋಗ ದಿನಾಚರಣೆ ಧ್ಯೇಯ – ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಅಡಿಯಲ್ಲಿ ಕಾಲೇಜಿನ 400ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. ಯೋಗ ಪ್ರೊಟೋಕಾಲ್ ನಿಯಮಾವಳಿ ಅನುಸಾರವಾಗಿ ತಾಡಾಸನ, ವೃಕ್ಷಸಾನ, ತ್ರಿಕೋನಾಸನ, ಅರ್ಧಚಕ್ರಾಸನ, ಇನ್ನಿತರ ಆಸನ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ವಿದ್ಯಾರ್ಥಿ ಸ್ಫೂರ್ತಿ ಮೊಯ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಕೃತಿ […]