ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಕಬಡ್ಡಿ: ಆಳ್ವಾಸ್ ಚಾಂಪಿಯನ್, ಮಹಿಳಾ ವಿಭಾಗದಲ್ಲಿ ಉಜಿರೆ ಎಸ್‍ಡಿಎಂಗೆ ಪ್ರಶಸ್ತಿ.

ವಿದ್ಯಾಗಿರಿ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್‍ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ.ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ಬುಧವಾರ ನಡೆದ ಪುರುಷರ ಫೈನಲ್‍ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ […]