ಮುದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಮೊಟ್ಟ ಮೊದಲ ಸಂಚಾರಿ ಚಿತಾಗಾರ ಕಾರ್ಯಾಚರಣೆ

ಕುಂದಾಪುರ: ಇಲ್ಲಿನ ಮುದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರವು ಗ್ರಾಮೀಣ ಭಾಗದಲ್ಲಿ ಕಂಡುಬರುತ್ತಿರುವ ಹೆಣಸುಡುವ ಸಮಸ್ಯೆಗಳಿಗೆ ಮುಕ್ತಾಯ ಹಾಡುವ ನಿಟ್ಟಿನಲ್ಲಿ ಮುಂದಾಗಿದೆ. ಕುಂದಾಪುರ ಬೈಂದೂರು ವಿಧಾನಸಭಾ ಕ್ಷೇತ್ರದ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉಚಿತವಾಗಿ ಸಂಚಾರಿ ಚಿತಾಗಾರವನ್ನು ಒದಗಿಸಿಕೊಡುವ ಮೂಲಕ ರಾಜ್ಯದಲ್ಲೇ ಮೊಟ್ಟ ಮೊದಲ ಸಂಚಾರಿ ಚಿತಾಗಾರ ಒದಗಿಸಿದ ಸಂಘ ಎನ್ನುವ ಕೀರ್ತಿಗೆ ಪಾತ್ರವಾಗಿ ಇತಿಹಾಸ ನಿರ್ಮಿಸಿದೆ. ಗ್ರಾಮೀಣ ಭಾಗದಲ್ಲಿ ಯಾರಾದರೂ ಮೃತರಾದಾಗ ಅವರ ಅಂತ್ಯಕ್ರಿಯೆ ನಡೆಸುವುದೇ ಒಂದು […]