ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ
ಬೆಂಗಳೂರು: ಶುಕ್ರವಾರದಂದು ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂಪಿ ಅವರನ್ನು ನೇಮಿಸಲಾಗಿದೆ. ರವಿ ಕುಮಾರ್ ಎಂ.ಆರ್. ಅವರನ್ನು ವರ್ಗಾಯಿಸಲಾಗಿದೆ. 2013ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಮುಲೈ ಮುಹಿಲನ್ ಎಂಪಿ ಬೆಂಗಳೂರಿನಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ರವಿಕುಮಾರ್ ಎಂ ಆರ್ ಅವರು 2022, ಅಕ್ಟೋಬರ್ 31 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ದಕ್ಷಿಣ […]