ಅವಿಭಜಿತ ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ; ಹೊಂಡ ಗುಂಡಿಯಿಂದ ಅಪಾಯಕ್ಕೆ ಆಹ್ವಾನವೀಯುತ್ತಿದೆ ರಾಷ್ಟ್ರೀಯ ಹೆದ್ದಾರಿ
ಉಡುಪಿ/ ಮಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಉಡುಪಿ ಹಾಗೂ ಮಂಗಳೂರಿನ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದಲ್ಲದೆ, ಅಲ್ಲಲ್ಲಿ, ಮರ-ಮನೆಮಟ್ಟುಗಳು ಉರುಳಿ ಹಲವರು ಪ್ರಾಣ ಕಳೆದುಕೊಂಡ ಘಟನೆಗಳು ವರದಿಯಾಗಿವೆ. ಇದರ ಜೊತೆಗೆ ಧಾರಾಕಾರ ಮಳೆಯಿಂದಾಗಿ ಮುಲ್ಕಿ-ಮಂಗಳೂರು ಹಾಗೂ ನಂತೂರು-ಬಿ.ಸಿ ರೋಡು ರಾ.ಹೆದ್ದಾರಿಯಲ್ಲಿ ಹೊಂಡ ಗುಂಡಿಗಳು ಕಾಣಿಸಿಕೊಂಡಿದ್ದು ಅಪಾಯಕ್ಕೆ ಆಹ್ವಾನವೀಯುತ್ತಿದೆ. ಕುಂದಾಪುರ-ಉಡುಪಿ-ಮುಲ್ಕಿ ಮಾರ್ಗವಾಗಿ ಹಲವಾರು ವಾಹನಗಳು ಮಂಗಳೂರಿಗೆ ಪ್ರಯಾಣಿಸುತ್ತವೆ. ನಿತ್ಯ ಸಂಚಾರ ನಡೆಸುವ ಈ ವಾಹನಗಳು ರಾ.ಹೆದ್ದಾರಿಯ ಹೊಂಡ ಗುಂಡಿಗಳನ್ನು ತಪ್ಪಿಸಿಕೊಂಡು ಚಲಿಸಬೇಕಾದ ಪರಿಸ್ಥಿತಿ […]
ಮೇ-3 ಮಂಗಳೂರಿಗೆ ಪ್ರಧಾನಿ ಮೋದಿ: ವಾಹನ ಸಂಚಾರದಲ್ಲಿ ಬದಲಾವಣೆ
ಮಂಗಳೂರು: ಮೇ 3ರಂದು ಮುಲ್ಕಿಯ ಕೊಲ್ನಾಡು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನವ ಕರ್ನಾಟಕ ಸಂಕಲ್ಪ ಸಮಾವೇಶ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ಬದಲಾವಣೆ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಭದ್ರತೆಯ ಹಿತದೃಷ್ಟಿಯಿಂದ ಮೇ 3 ರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಬೆಳಗ್ಗೆ ಸುಮಾರು 10.30ರ ಬಳಿಕ ಪ್ರಧಾನಿ ಮೋದಿ ಕೊಲ್ನಾಡು ಹೆಲಿಪ್ಯಾಡ್‌ನಿಂದ ಕಾರ್ಯಕ್ರದ ಸ್ಥಳಕ್ಕೆ […]
ಮುಲ್ಕಿ: ಹಿಟ್ ಎಂಡ್ ರನ್ ಪ್ರಕರಣದ ಆರೋಪಿ ಬಂಧನ
ಮುಲ್ಕಿ: ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ ವರದಿಯಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) […]
ಸಿವಿಲ್ ಇಂಜಿನಿಯರ್ ಗಳ ವೃತ್ತಿಪರ ಒಕ್ಕೂಟದ ಸ್ಥಾಪಕಾಧ್ಯಕ್ಷರಾಗಿ ಜೀವನ್ ಶೆಟ್ಟಿ ಆಯ್ಕೆ
ಮೂಲ್ಕಿ: ತಾಲೂಕು ವ್ಯಾಪ್ತಿಯ ಸಿವಿಲ್ ಇಂಜಿನಿಯರ್ ಗಳ ವೃತ್ತಿಪರ ಒಕ್ಕೂಟ ಅಸೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕ ಅಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಾಧಿಕ್ ಅಲಿ, ಕಾರ್ಯದರ್ಶಿಯಾಗಿ ಸುಜಿತ್ ಎಸ್ ಸಾಲ್ಯಾನ್, ಜತೆ ಕಾರ್ಯದರ್ಶಿಯಾಗಿ ವರುಣ್, ಕೋಶಾಧಿಕಾರಿಯಾಗಿ ನವೀನ್ ಪಿರೇರಾ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಅನೂಪ್ ಕುಮಾರ್ ಶೆಟ್ಟಿ, ಕೆ.ಹರಿಶ್ಚಂದ್ರ, ಚರಣ್ ಕುಮಾರ್ ಮುಂತಾದವರು ಆಯ್ಕೆಯಾಗಿದ್ದಾರೆ. ಹೊಸದಾಗಿ ಘೋಷಣೆಯಾದ ಮೂಲ್ಕಿ ತಾಲೂಕಿನ ಎಲ್ಲ ಅಭಿವೃದ್ದಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ […]