ಮಲ್ಪೆ: ಸಮುದ್ರದಲ್ಲಿ ಮುಳುಗಿ ಯುವಕ ಸಾವು
ಮಲ್ಪೆ: ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತನನ್ನು ಬೆಂಗಳೂರಿನ ನಿವಾಸಿ 28 ವರ್ಷದ ಸಾಮ್ರಾಟ್ ಎಂದು ಗುರುತಿಸಲಾಗಿದೆ. ಇವರು ಮದುವೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಡುಪಿ ಬಂದಿದ್ದರು ಎನ್ನಲಾಗಿದೆ. ಇಂದು ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿದಿದ್ದು, ಈ ವೇಳೆ ಸಮುದ್ರದ ಅಲೆಯ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು […]