ಅಧಿಕೃತವಾಗಿ ವಿಚ್ಛೇದನ ಪಡೆದ ಯುಜಿ ಚಾಹಲ್-‌ ಧನಶ್ರೀ ವರ್ಮಾ

ಮುಂಬೈ: ಭಾರತೀಯ ಕ್ರಿಕೆಟಿಗ ಯುಜುವೇಂದ್ರ ಚಾಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ. ಅವರ ವಿಚ್ಛೇದನದ ಸುದ್ದಿ ತಿಂಗಳುಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾಗಿದೆ. ಕಳೆದ ಕೆಲವು ತಿಂಗಳಿನಿಂದ ಚಾಹಲ್‌ ಮತ್ತು ಧನಶ್ರೀ ಸಾಮಾಜಿಕ ಜಾಲತಾಣಗಳಲ್ಲಿ ರಹಸ್ಯ ಪೋಸ್ಟ್‌ಗಳನ್ನು ಹಂಚಿಕೊಂಡು, ತಮ್ಮ ಡಿವೋರ್ಸ್‌ ಬಗ್ಗೆ ಸುಳಿವು ನೀಡಿದ್ದರು. ದಂಪತಿಗಳ ಅಂತಿಮ ವಿಚಾರಣೆ ಮತ್ತು ಎಲ್ಲಾ ಅಗತ್ಯ ಔಪಚಾರಿಕತೆಗಳು ಗುರುವಾರ (ಫೆ.20) ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ನಡೆದವು ಎಂದು ವರದಿಯಾಗಿದೆ. ಕೋರ್ಟ್‌ ಗೆ ಇಬ್ಬರೂ […]