ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಸೇರಿ 27 ಮಂದಿ ವಿರುದ್ಧ ಭ್ರಷ್ಟಾಚಾರ ಆರೋಪ: ಎಫ್ ಐಆರ್ ದಾಖಲು
ಮುಂಬೈ: ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪರಮ್ ಬಿರ್ ಸಿಂಗ್, ಡಿಸಿಪಿ ಪರಾಗ್ ಮನೆರೆ ಹಾಗೂ ಇತರ 26 ಮಂದಿ ಪೊಲೀಸರ ವಿರುದ್ಧ ಭ್ರಷ್ಟಾಚಾರ ಕೇಸು ದಾಖಲಾಗಿದೆ. ಕ್ರಿಮಿನಲ್ ಪಿತೂರಿ, ಸಾಕ್ಷಿಗಳ ನಾಶ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ತಡೆ ಕಾಯ್ದೆ), 1989ರ ವಿವಿಧ ಸೆಕ್ಷನ್ ಗಳಡಿಯಲ್ಲಿ ಅಕೊಲದಲ್ಲಿ ಕೊತ್ವಾಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಝಿರೋ ಎಫ್ಐಆರ್ ನ್ನು […]