ಮಹರಾಷ್ಟ್ರದಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಮುಂಬೈ: ಮಹಾನಗರಿ ಮುಂಬೈನಲ್ಲಿ ಕಳೆದೆರಡು ದಿನಗಳದ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ಇನ್ನೂ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಶನಿವಾರ ಬೆಳಗ್ಗೆಯಿಂದ ಮುಂಬೈ ನಗರಿಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ನಗರಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾಯಿನಾಥ್ ಸಬ್ವೇ, ದಸೀಹರ್ ಸಬ್ವೇ, ಮೋತಿಲಾಲ್ ನಗರ ಪೋಸ್ಟ್ ಆಫೀಸ್, ಥಾಣೆ […]