ಮುಂಬೈ:ಹಿಂದಿ ಬಿಗ್ ಬಾಸ್ 13 ರ ಸ್ಪರ್ಧಿ ಹಾಗೂ ‘ಕಾಂಟಾ ಲಗಾ’ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ’

ಮುಂಬೈ: ‘ಕಾಂಟಾ ಲಗಾ’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯರಾಗಿದ್ದ ಖ್ಯಾತ ನಟಿ ಮತ್ತು ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿ ಶೆಫಾಲಿ ಜರಿವಾಲಾ (42) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿದ್ದ ಶೆಫಾಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸದ್ಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ರವಾನಿಸಲಾಗಿದೆ. ರಾತ್ರೋರಾತ್ರಿ ತಾರೆಯಾದ […]