ಮುಂಬಯಿ ವಿಶ್ವವಿದ್ಯಾಲಯ ಕನ್ನಡ ಎಂ.ಎ ಪರೀಕ್ಷೆಯಲ್ಲಿ ಅನಿತಾ ಪಿ.ಪೂಜಾರಿ ಪ್ರಥಮ ರ್ಯಾಂಕ್

ಮುಂಬಯಿ: ಮುಂಬಯಿ ವಿಶ್ವವಿದ್ಯಾಲಯ ಕಳೆದ 2019ನೇ ಮೇ ತಿಂಗಳಲ್ಲಿ ನಡೆಸಿದ ಕನ್ನಡ ಎಂ.ಎ ಪರೀಕ್ಷೆಯಲ್ಲಿ ಅನಿತಾ ಪಿ.ಪೂಜಾರಿ ತಾಕೊಡೆ ಅವರು ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಕೊಡೆಯ ಅನಿತಾ ಅವರು ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಬಿ.ಎ ಪದವಿ ಪಡೆದಿದ್ದಾರೆ. ಕಳೆದ ಎರಡು ದಶಕಗಳಿಂದ ಮುಂಬಯಿ ವಾಸಿಯಾಗಿರುವ ಅನಿತಾ ಓರ್ವ ಪ್ರತಿಭಾನ್ವಿತ ವಿದ್ಯಾರ್ಥಿನಿ, ಕವಯತ್ರಿ, ಕಥೆಗಾರ್ಥಿ, ಅಂಕಣಕಾರರಾಗಿ ಗುರುತಿಸಿಕೊಂಡಿದ್ದು  ಕನ್ನಡದ ಕೃತಿಗಳನ್ನೂ ಪ್ರಕಟಿಸಿದ್ದಾರೆ