ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ: ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಚಿತ್ಪಾಡಿಯ ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಮೇ 16 ಸೋಮವಾರದಂದು ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜೋಕಿಮ್ ವಿಜಯ್ ಡಿ ಸೋಜಾ, ಲಯನ್ಸ್ ಕ್ಲಬ್ ಅಧ್ಯಕ್ಷ ಎಂ. ವಿಠಲ್ ಪೈ, ಕಾರ್ಯದರ್ಶಿ ವಿಷ್ಣುದಾಸ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ […]

ಕೇಳುವವರಿಲ್ಲ ನಗರದ ಕ್ಲಾಕ್ ಟವರ್ ಗೋಳು: ಅವ್ಯವಸ್ಥೆಯ ವಿರುದ್ದ ಧ್ವನಿ ಎತ್ತಿದ ಜಿಲ್ಲಾ ನಾಗರಿಕ ಸಮಿತಿ

ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಪರಿಸರ ಅವ್ಯವಸ್ಥೆಯ ಆಗರವಾಗಿದ್ದು, ಕೂಡಲೇ ಸಮಸ್ಯೆಯನ್ನು ಸರಿಪಡಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ನಗರಸಭೆಯನ್ನು ಆಗ್ರಹಿಸಿದ್ದಾರೆ. ಗಡಿಯಾರ ಗೋಪುರದ ಬಳಿ ಅಳವಡಿಸಿದ್ದ ಸಾರ್ವಜನಿಕ ಕುಡಿಯುವ ನೀರಿನ ನಳ್ಳಿ ಹಾಳಾಗಿ ವರ್ಷಗಳು ಸಂದಿವೆ. ನೀರು ತಂಪಾಗಿಸುವ ಶೀತಲೀಕೃತ ಯಂತ್ರವು ಹಾಳಾಗಿ ತುಕ್ಕು ಹಿಡಿದಿದೆ. ಇದೀಗ ಈ ಕೊಠಡಿಯು ಕುಡುಕರ ಶೌಚಾಲಯವಾಗಿ ಮಾರ್ಪಟ್ಟಿದೆ. ಪ್ರಯಾಣಿಕರು, ಯಾತ್ರಾರ್ಥಿಗಳು, ಪ್ರವಾಸಿಗರು ಕುಡಿಯುವ ನೀರಿಗಾಗಿ ಹುಡುಕಾಟ ನಡೆಸಬೇಕಾದ […]

ನಗರಸಭೆ- ಸಾಮಾನ್ಯ ಸಭೆ

ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ಎಪ್ರಿಲ್ 28 ರಂದು ಬೆಳಗ್ಗೆ 10.30 ಕ್ಕೆ ಕಚೇರಿಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.