ಮುಂಡ್ಕೂರು: ಮಹಿಳೆ ನೇಣಿಗೆ ಶರಣು
ಕಾರ್ಕಳ: ಇಲ್ಲಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಚಾವಂಡಿಗುಡ್ಡೆಯ ಮನೆಯಲ್ಲಿ ವಾಸವಾಗಿದ್ದ ಫ್ಲೋರಿನ್ ಪಿಂಟೊ (52) ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಕಳೆದ ಮೂರು ತಿಂಗಳಿನಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.