ಉತ್ಸವಗಳಿಗೆ ದುಂದುವೆಚ್ಚ ನಡೆಸುವ ಸರ್ಕಾರದ ಬಳಿ ಹೊರಗುತ್ತಿಗೆ ನೌಕರರ ನೇರಪಾವತಿಗೆ ಹಣವಿಲ್ಲ ಎನ್ನುವುದು ಹಾಸ್ಯಾಸ್ಪದ: ರಮೇಶ್ ಕಾಂಚನ್
ಉಡುಪಿ: ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ, ಬೆಂಗಳೂರು ಇದರ ನೇತೃತ್ವದಲ್ಲಿ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಸ್ಯಾನಿಟರಿ ಸೂಪರ್‌ವೈಸರ್, ಲೋಡರ್ಸ್, ಕ್ಲೀನರ್ಸ್, ಒಳಚರಂಡಿ ಕಾರ್ಮಿಕರು, ಡಿ.ಇ.ಓ, ಎಸ್.ಟಿ.ಪಿ ಆಪರೇಟರ್ಸ್, ಕಚೇರಿ ಸಹಾಯಕರು ಸೇರಿದಂತೆ ಎಲ್ಲಾ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಆಗ್ರಹಿಸಿ ಫೆ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಧರಣಿಯನ್ನು ಜಿಲ್ಲಾ ಹೊರಗುತ್ತಿಗೆ ನೌಕರರ ಸಂಘವು ಉಡುಪಿ ಜಿಲ್ಲಾಧಿಕಾರಿ […]