55 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ವಶ; 34,000 ರೂ. ದಂಡ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆಗಸ್ಟ್ 19 ರಿಂದ 24 ರ ವರೆಗೆ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 55 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 34,000 ರೂ. ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ, ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು. ಜುಲೈನಿಂದದ ಈವರೆಗೆ ಒಟ್ಟು 425 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 1,04,200 ರೂ. […]

ಜು. 21-22 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ನೀರು ಶುದ್ಧೀಕರಣ ಘಟಕದಲ್ಲಿ ಕ್ಲುಬಿಕಲ್ ಮೀಟರ್, ಟ್ಯಾಂಕ್ ಕ್ಲೀನಿಂಗ್ ಹಾಗೂ ಗೇಟ್ ವಾಲ್ವ್ ಫಿಕ್ಸಿಂಗ್ ಇತ್ಯಾದಿ ಕೆಲಸಗಳನ್ನು ನಿರ್ವಹಿಸಬೇಕಾಗಿರುವುದರಿಂದ, ಜುಲೈ 21 ರ ಬೆಳಗ್ಗೆ 6 ರಿಂದ ಜು. 22 ರ ಬೆಳಗ್ಗೆ 6 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಂಪರ್ಕಿಸಲು ಸಹಾಯವಾಣಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಮುಂಗಾರು ಮಳೆಯ ಸಂದರ್ಭದಲ್ಲಿ ಯಾವುದೇ ಅನಾನುಕೂಲವಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ: 1077, ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2520306, ಮೆಸ್ಕಾಂ ಸಹಾಯವಾಣಿ ಸಂಖ್ಯೆ: 1912, ನಗರಸಭೆ ಪೌರಾಯುಕ್ತ ರಮೇಶ್ ಪಿ ನಾಯ್ಕ್ ಮೊ.ನಂ: 9448120430, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಮೊ.ನಂ: 9743412642 ಮತ್ತು 6362351481, ನಗರಸಭೆಯ ಪರಿಸರ ಅಭಿಯಂತರ […]

ಕುಡಿಯುವ ನೀರಿನ ಸಮರ್ಪಕ ಪೂರೈಕೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲ ಪ್ರಾರಂಭವಾಗುವವರೆಗೆ ಸಮರ್ಪಕ ರೀತಿಯಲ್ಲಿ ಕುಡಿಯುವ ನೀರು ಪೂರೈಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು. ಅವರು ಮಂಗಳವಾರದಂದು ನಗರಸಭೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಸ್ತುತ ಕುಡಿಯುವ ನೀರಿಗೆ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡುವ ರೇಷನಿಂಗ್ ವ್ಯವಸ್ಥೆಯನ್ನು ಅಳವಡಿಸಿದ್ದು ಅದನ್ನು ಮುಂದುವರಿಸುವಂತೆ ಹೇಳಿದರು. ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಬೇಡಿಕೆಯನ್ನು ಗಮನಿಸಿ, ನಗರ ಸಭಾ ಸದಸ್ಯರಿಗೆ ಮಾಹಿತಿ ನೀಡಿ […]

ಮಲ್ಪೆ: ಸರಕಾರಿ ಜಾಗ ಅತಿಕ್ರಮಣ ಮಾಡಿದಲ್ಲಿ ಕಾನೂನು ಕ್ರಮ

ಮಲ್ಪೆ: ಮಲ್ಪೆ ಬೀಚ್ ಉತ್ತರ ಭಾಗದ ಪ್ರದೇಶದಲ್ಲಿರುವ ಸರಕಾರಕ್ಕೆ ಸೇರಿದಂತಹ ಖಾಲಿ ಜಾಗದ ಸರ್ವೇ ಪ್ರಕ್ರಿಯೆಯು ಈಗಾಗಲೇ ಮುಕ್ತಾಯಗೊಂಡಿದ್ದು, ಸದರಿ ಪ್ರದೇಶದಲ್ಲಿ ಕೆಲವೊಂದು ವ್ಯಕ್ತಿಗಳು ಅನಧಿಕೃತವಾಗಿ ಮಣ್ಣನ್ನು ಹಾಕಿ ಜಾಗವನ್ನು ಸಮತಟ್ಟು ಮಾಡುತ್ತಿರುವುದು ಮತ್ತು ಸರ್ಕಾರಿ ಜಾಗ ಅತಿಕ್ರಮಣ ಮಾಡುತ್ತಿರುವುದು ಕಂಡುಬಂದಿದ್ದು, ಇದು ಸಿ.ಆರ್.ಝಡ್ ಇಲಾಖೆಯ ನಿಯಮ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ಸದರಿ ಪ್ರದೇಶದಲ್ಲಿ ಅನಧಿಕೃತವಾಗಿ ಯಾವುದೇ ಕಾಮಗಾರಿ ಕೈಗೊಂಡಲ್ಲಿ ಮುನ್ಸೂಚನೆ ನೀಡದೇ ತೆರವುಗೊಳಿಸಲಾಗುವುದು ಹಾಗೂ ಸರಕಾರಕ್ಕೆ ಸಂಬಂಧಿಸಿದ ಖಾಲಿ ಜಾಗದಲ್ಲಿ ಅನಧಿಕೃತವಾಗಿ ಕಾಮಗಾರಿ ಕೈಗೊಳ್ಳುವವರ ವಿರುದ್ಧ ಕಾನೂನು […]