ಉಡುಪಿ: ಏ.11-12 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಪರ್ಕಳದಿಂದ ಹಿರಿಯಡ್ಕವರೆಗಿನ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಸಂದರ್ಭ, ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಗೆ ಹಾನಿಯಾಗಿದ್ದು, ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಗರಸಭಾ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಅರ್ಜಿದಾರರ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ
ಉಡುಪಿ: ಉಡುಪಿ ನಗರಸಭೆಯಲ್ಲಿ ಜನನ-ಮರಣ ಪ್ರಮಾಣ ಪತ್ರ ಪಡೆಯಲು ಸೂಕ್ತ ವಿಳಾಸ ನಮೂದಿಸಿ, ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ್ದಲ್ಲಿ, ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ಮನೆ ಬಾಗಿಲಿಗೆ ರವಾನಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಆನ್ಲೈನ್ ತಂತ್ರಾಂಶದ ಮೂಲಕ ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸೂಚನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಉದ್ದಿಮೆದಾರರು 2023-24 ನೇ ಸಾಲಿನಲ್ಲಿ ವ್ಯಾಪಾರ ಆನ್ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಬೇಕಾಗಿದ್ದು, ಪ್ರಸಕ್ತ ಸಾಲಿನಲ್ಲಿ ಆನ್ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಲು ಬಾಕಿ ಇರುವವರು ಹಾಗೂ ನವೀಕರಿಸದೇ ಇರುವವರು ಕೂಡಲೇ ದಂಡ ಪಾವತಿಯೊಂದಿಗೆ ವೆಬ್ಸೈಟ್ http://www.mrc.gov.in/TradeLicense/login ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 2023 ರ ಏಪ್ರಿಲ್ 1 ರ ನಂತರ 2023-24 ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಅವಕಾಶ […]
ಕುಡಿಯುವ ನೀರಿಗೆ ತತ್ವಾರ; ಅನ್ಯ ಉದ್ದೇಶಕ್ಕೆ ಬಳಸಿದಲ್ಲಿ ಸಂಪರ್ಕ ಕಡಿತ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗುತ್ತಿದ್ದು ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಉಡುಪಿ ನಗರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಗಳಾದ ವಾಹನ ತೊಳೆಯಲು, ಗಿಡಗಳಿಗೆ ನೀರು ಬಿಡಲು ಬಳಸಿದ್ದು ಕಂಡುಬಂದಲ್ಲಿ ಸದರಿಯವರ ನೀರಿನ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ ದಂಡ ವಿಧಿಸಲಾಗುವುದು. ನೀರನ್ನು ಮಿತವಾಗಿ ಬಳಸಲು ಆದ್ಯತೆ ನೀಡಿ, […]
ಕುಂಜಿಬೆಟ್ಟು ವಾರ್ಡ್ ರಸ್ತೆ ಕಾಂಕ್ರೀಟ್ ಕಾಮಗಾರಿ: 30 ದಿನ ಸಂಚಾರ ನಿರ್ಬಂಧ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಕುಂಜಿಬೆಟ್ಟು ವಾರ್ಡಿನ ಶಾರದ ಕಲ್ಯಾಣ ಮಂಟಪ ರಸ್ತೆಯಿಂದ ಸೇತುವೆವರೆಗೆ ರಸ್ತೆ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ 30 ದಿನಗಳವರೆಗೆ ಸದ್ರಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಅಕ್ಕ-ಪಕ್ಕದ ಬದಲೀ ರಸ್ತೆಯನ್ನು ಬಳಸಿ, ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.