ನ. 28 ರಂದು ನಗರಸಭೆಯ ಸಾಮಾನ್ಯ ಸಭೆ
ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ನವೆಂಬರ್ 28 ರಂದು ಬೆಳಗ್ಗೆ 10.30 ಕ್ಕೆ ಕಚೇರಿಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ನವೆಂಬರ್ 25 ರಂದು ಕುಂದಾಪುರ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 08254-230490 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ನವೆಂಬರ್ 15 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: ಹಿರಿಯಡ್ಕದ ಬಜೆ ನೀರು ಸರಬರಾಜು ಘಟಕದಲ್ಲಿ ನವೆಂಬರ್ 15 ರಂದು ವಿದ್ಯುತ್ ಸ್ಥಗಿತಗೊಳಿಸುವುದರಿಂದ, ಅಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.
ನಗರಸಭೆ ಅಧಿಕಾರಿಗಳಿಂದ ಕಾರ್ಯಾಚರಣೆ: 45 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ; ತಪ್ಪಿತಸ್ಥರಿಗೆ ದಂಡ
ಉಡುಪಿ: ಅ.5 ರಂದು ಉಡುಪಿ ನಗರಸಭೆ ಅಧಿಕಾರಿಗಳು ನಗರದಲ್ಲಿ ಧಿಢೀರ್ ಕಾರ್ಯಾಚರಣೆ ನಡೆಸಿದ್ದು, ಅಂಗಡಿಗಳಲ್ಲಿ ಕಾನೂನು ಬಾಹಿರವಾಗಿ ಬಳಕೆ ಮಾಡಲಾಗುತ್ತಿದ್ದ ಸುಮಾರು 45 ಕೆ.ಜಿ ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದು,10,200 ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು, ಮಾರುಕಟ್ಟೆ ಸ್ಥಳ), ಶಾಪಿಂಗ್ ಕೇಂದ್ರಗಳು, ಸಿನಿಮಾ ಮಾಲ್‌ಗಳು, ಮನೆಗಳು, ಪ್ರವಾಸೋದ್ಯಮ ಸ್ಥಳಗಳು, […]
ಉಡುಪಿ ನಗರಸಭಾ ಹಾಲಿ ಸದಸ್ಯೆ ಸೆಲಿನಾ ಕರ್ಕಡ ಇನ್ನಿಲ್ಲ
ಉಡುಪಿ: ಪೆರಂಪಳ್ಳಿ ವಾರ್ಡ್ ನ ಕಾಂಗ್ರೆಸ್ ನ ನಗರಸಭಾ ಸದಸ್ಯೆ ತಮ್ಮ 52 ನೇ ವಯಸ್ಸಿನಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಸೆಲಿನಾ ಅವರು ಸ್ವಲ್ಪ ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದು, ಬುಧವಾರದಂದು ಕಾಯಿಲೆ ಹೆಚ್ಚಾದ ಹಿನ್ನೆಲೆಯಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ. ಎರಡು ಬಾರಿಯ ನಗರಸಭಾ ಸದಸ್ಯೆಯಾಗಿದ್ದ ಸೆಲಿನಾ ಪತಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜು ಸ್ಥಗಿತ
ಉಡುಪಿ: ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ರೇಚಕ ಸ್ಥಾವರದದಲ್ಲಿ ತಾಂತ್ರಿಕ ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸಲಾಗುವುದರಿಂದ ಅಕ್ಟೋಬರ್ 31 ರಂದು ಹಾಗೂ ನವೆಂಬರ್ 01 ರಂದು ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಲ್ಲಿ ಕುಡಿಯುವ ನೀರು ಸರಬರಾಜಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.