ಸೇನರ ಜಿಡ್ದ ಮಾರ್ಗಕ್ಕೆ ಅರುಣಾಬ್ಜ ಮಾರ್ಗ ನಾಮಕರಣ: ಆಕ್ಷೇಪಣೆ ಆಹ್ವಾನ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರಿನ ಸಾಲ್ಮರದಿಂದ ಸೇನರ ಜಿಡ್ದಕ್ಕೆ ಹೋಗುವ ಮಾರ್ಗಕ್ಕೆ ಕವಿ ಅರುಣಾಬ್ಜ ಮಾರ್ಗ ಎಂದು ನಾಮಕರಣಗೊಳಿಸುವ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ 30 ದಿನಗಳ ಒಳಗೆ ನಗರಸಭೆ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ನಗರಸಭಾ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಿಗೆ ಕುರಿತು ಸಮೀಕ್ಷಾ ಕಾರ್ಯ

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ನಗರಸಭಾ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಿಗೆ ಕುರಿತು ಸಮೀಕ್ಷಾ ಕಾರ್ಯ ನಡೆಸುತ್ತಿದ್ದು, ಸಮೀಕ್ಷೆ ಮಾಡುವವರಿಗೆ ಮಾಹಿತಿ ನೀಡಿ ಸಹಕರಿಸುವಂತೆ, ಈವರೆಗೂ ನವೀಕರಿಸದೇ ಇರುವವರು ಕೂಡಲೇ ನವೀಕರಿಸುವಂತೆ, ಉದ್ದಿಮೆ ಸ್ಥಗಿತಗೊಳಿಸಿ ರದ್ದುಗೊಳಿಸದೇ ಇದ್ದಲ್ಲಿ ನಗರಸಭಾ ಕಚೇರಿಗೆ ಮಾಹಿತಿ ನೀಡುವಂತೆ ಹಾಗೂ ಎಲ್ಲಾ ಉದ್ದಿಮೆದಾರರು ಏಕಬಳಕೆ ಪ್ಲಾಸ್ಟಿಕ್ ಅನ್ನು ಬಳಸದಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು, ನಗರಸಭೆಯಿಂದ ರಚಿಸಲ್ಪಟ್ಟ ಅರ್ಹ ಸ್ವ-ಸಹಾಯ ಗುಂಪುಗಳ ಹಾಗೂ ಪ್ರದೇಶ ಮಟ್ಟದ ಒಕ್ಕೂಟದ 18 ರಿಂದ 45 ವರ್ಷದೊಳಗಿನ ಅರ್ಹ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ […]

ಸೆಪ್ಟಂಬರ್ 23 ರಂದು ನಗರಸಭೆ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಅಲಭ್ಯ

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಸೆಪ್ಟಂಬರ್ 23 ರಂದು ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಳಗ್ಗೆ 8 ಗಂಟೆಗೆ ನಗರಸಭಾ ಕಚೇರಿಯಿಂದ ಪುರಭವನದವರೆಗೆ ಪುರ ಮೆರವಣಿಗೆ ಹಾಗೂ ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಮಾಡಲಾಗುವುದಿಲ್ಲ ಹಾಗೂ ನಗರಸಭಾ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಲಭ್ಯವಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಎಸ್.ಎಫ್. ಸಿ ಮುಕ್ತನಿಧಿ ಹಾಗೂ ನಗರಸಭಾ ನಿಧಿ: ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್. ಸಿ ಮುಕ್ತನಿಧಿ ಹಾಗೂ ನಗರಸಭಾ ನಿಧಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅನುದಾನದಡಿ ಪರಿಶಿಷ್ಟ ಜಾತಿಗೆ ಒಳಚರಂಡಿ ಜೋಡಣೆ, ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ನವೀಕರಣ, ಪರಿಶಿಷ್ಟ ಪಂಗಡಕ್ಕೆ ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ನವೀಕರಣ, ನಳ್ಳಿ ನೀರಿನ ಜೋಡಣೆ, ಶೌಚಾಲಯ ನಿರ್ಮಾಣ ಮತ್ತು ಸ್ವಂತ ಉದ್ಯೋಗ ಹೊಂದಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]