ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಹೋರಾಟ: ಮುನೀರ್ ಕಾಟಿಪಳ್ಳ

ಮಂಗಳೂರು: ಎಂಆರ್ ಪಿ ಎಲ್ ಉದ್ಯೋಗಗಳಲ್ಲಿ ಶೇಕಡಾ 80 ರಷ್ಟು ಪಾಲು ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಸಿಗಲೇಬೇಕು. ಅದು ಕೈಗಾರಿಕೆಗಾಗಿ ನೆಲ, ಜಲ ನೀಡಿದ ತುಳುನಾಡಿನ ಹಕ್ಕು.‌ ಕಂಪೆನಿ ಈ ನ್ಯಾಯಯುತ ಬೇಡಿಕೆಯನ್ನು ಕಡೆಗಣಿಸಿದರೆ ಉದ್ಯೋಗದ ಹಕ್ಕಿನ ಹೋರಾಟ ಗಂಭೀರ ಸ್ವರೂಪ ಪಡೆಯಲಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು. ಅವರು ಎಂ ಆರ್ ಪಿ ಎಲ್ ಪ್ರಧಾನ ದ್ವಾರದ ಮುಂಭಾಗ ಎಮ್ ಆರ್ ಪಿ ಎಲ್ ನೇಮಕಾತಿ ನಡೆಸುತ್ತಿರುವ 233 ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು […]