ಪರಶುರಾಮ ಪ್ರತಿಮೆ ವಿಚಾರದಲ್ಲಿ ಅಪಪ್ರಚಾರ ಮಾಡುವ ಬದಲು ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸಲಿ: ಕುಯಿಲಾಡಿ ಸುರೇಶ್ ನಾಯಕ್ ಸವಾಲು
ಉಡುಪಿ: ಪರಶುರಾಮನ ಪ್ರತಿಮೆ ವಿಚಾರದಲ್ಲಿ ಆಧಾರ ರಹಿತ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ಸಿಗೆ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿಸಲು ಯಾಕೆ ಮನಸ್ಸು ಮಾಡುತ್ತಿಲ್ಲ. ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತ ನಡೆಸುತ್ತಿದೆ. ತನಿಖಾ ಸಂಸ್ಥೆಗಳು, ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು […]