ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ
ಬೆಳ್ತಂಗಡಿ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಇವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಜೊತೆಗಿದ್ದರು.
ಕುತೂಹಲದ ಕಣವಾದ ಕಾರ್ಕಳ ಚುನಾವಣಾ ಕ್ಷೇತ್ರ: ಕಾಂಗ್ರೆಸ್ ನಿಂದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಕಣಕ್ಕೆ
ಕಾರ್ಕಳ: ಈ ಬಾರಿ ಕಾರ್ಕಳದ ಚುನಾವಣಾ ಕಣ ತೀವ್ರ ಕುತೂಹಲ ಮೂಡಿಸಿದೆ. ಒಂದೆಡೆ ಬಿಜೆಪಿಯ ಸುನಿಲ್ ಕುಮಾರ್, ಮತ್ತೊಂದೆಡೆ ಶ್ರೀ ರಾಮ ಸೇನೆ ಯ ಪ್ರಮೋದ್ ಮುತಾಲಿಕ್ ಎದುರು ಬದುರಾಗಿದ್ದರೆ, ಇದೀಗ ಪ್ರತಿಪಕ್ಷ ಕಾಂಗ್ರೆಸ್ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಟಿಕೆಟ್ ನೀಡಿದೆ. ಈ ಬಾರಿ ಕಾರ್ಕಳದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಜಯ ಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎನ್ನುವುದು ಮತ ಎಣಿಕೆಯ ದಿನದಂದು ಗೊತ್ತಾಗಲಿದೆ.
ಉಡುಪಿ ಜಿಲ್ಲೆಯಲ್ಲಿ 40% ಕಮಿಷನ್ ವ್ಯವಹಾರ ಇಲ್ಲ: ಮುನಿಯಾಲು ಉದಯ್ ಕುಮಾರ್ ಶೆಟ್ಟಿ
ಉಡುಪಿ: ರಾಜ್ಯ ಸರ್ಕಾರ 40% ಕಮಿಷನ್ ಕೇಳುತ್ತೆ ಅನ್ನೋ ಆರೋಪ ಮಾಡಲಾಗಿದ್ದು ಈ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಂದ ಜನರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದು, ಅದಕ್ಕೆ ಉತ್ತರ ನೀಡುವ ಅವಶ್ಯಕತೆ ಇದೆ. ಇಲ್ಲದಿದ್ದಲ್ಲಿ ನಾವೂ ಕೂಡಾ ಇದರಲ್ಲಿ ಭಾಗಿಯಾಗಿದ್ದೇವೆ ಎನ್ನುವ ಅನುಮಾನ ಜನರಲ್ಲಿ ಮೂಡುತ್ತದೆ. ಉಡುಪಿ ಜಿಲ್ಲೆಯಲ್ಲಿ 25 ವರ್ಷದಿಂದ ಗುತ್ತಿಗೆ ಕಾಮಗಾರಿಗಳನ್ನು ನಡೆಸುತ್ತಿದ್ದೇವೆ. ಇಲ್ಲಿ ಕಳೆದ 25 […]