ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣ: ಐದು ಆರೋಪಿಗಳ ಅರೆಸ್ಟ್
ಹಿರಿಯಡಕ: ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಿರಿಯಡಕ ಪೇಟೆಯಲ್ಲಿ ಸೆ. 24ರಂದು ಮಧ್ಯಾಹ್ನ ಹಾಡುಹಗಲೇ ಕಿಶನ್ ಹೆಗ್ಡೆಯ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮನೋಜ್ ಕೋಡಿಕೆರೆ ಸೇರಿದಂತೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಾಹ್ನ ವೇಳೆಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ಬಳಿಕ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.