ಹೆಮ್ಮಾಡಿ ಗುಲಾಬಿ ಕೊಲೆ ಪ್ರಕರಣ: ಶಂಕಿತ ಆರೋಪಿ ಬೆಂಗಳೂರಿನಲ್ಲಿ ವಶ

ಕುಂದಾಪುರ: ಹೆಮ್ಮಾಡಿ ಗುಲಾಬಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ‌ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ವಿಶ್ವಾಸಾರ್ಹ ಮೂಲಗಳಿಂದ ತಿಳಿದು ಬಂದಿದೆಯಾದರೂ ಆರೋಪಿಯನ್ನು ವಶಪಡಿಸಿಕೊಂಡ ಬಗ್ಗೆ ಪೊಲೀಸರು ಇನ್ನೂ ದೃಢಪಡಿಸಿಲ್ಲ. ಗುಲಾಬಿ ಕೊಲೆ ಪ್ರಕರಣದ ಶಂಕಿತ ಆರೋಪಿ ಕೊಲ್ಲೂರು ಸಮೀಪದ ಮುದೂರ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದು ಕುಂದಾಪುರಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ. ಹೆಮ್ಮಾಡಿ‌ ಹರೆಗೋಡು ವಿಜಯ ಗೇರುಬೀಜ ಸಮೀಪದ ನಿವಾಸಿ ಗುಲಾಬಿ (55) ಫೆಬ್ರವರಿ 28ರ ತಡರಾತ್ರಿ ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. […]

ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ ಅನುಮಾನಾಸ್ಪಸ ಸಾವು ಪ್ರಕರಣ

ಕುಂದಾಪುರ: ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ(55) ಅನುಮಾನಾಸ್ಪಸ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದ್ದು, ಕತ್ತು ಹಿಸುಕಿ ಉಸಿರುಗಟ್ಟಿ ಸಾಯಿಸಲಾಗಿದೆ ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ. ಈ ಮೂಲಕ ಅನುಮಾನಾಸ್ಪದ ಸಾವು ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಪತಿ ತೀರಿಕೊಂಡ ಬಳಿಕ ಕಳೆದೆರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಗುಲಾಬಿ ಮಾರ್ಚ್ 1ರ ಬೆಳಿಗ್ಗೆ ಗುಲಾಬಿ ಶವವಾಗಿ ಮನೆಯ ಕೋಣೆಯೊಳಗೆ ಪತೆಯಾಗಿದ್ದರು. ಗುಲಾಬಿ ಧರಿಸಿದ್ದ ಚಿನ್ನಾಭರಣಗಳು ಇಲ್ಲದ ಹಿನ್ನೆಲೆಯಲ್ಲಿ ಸ್ಥಳೀಯರು ಕೊಲೆ ಶಂಕೆ […]

ಮಹಿಳೆ ಅನುಮಾನಾಸ್ಪದ ಸಾವು: ತೀವ್ರಗೊಂಡ ಪೊಲೀಸ್ ತನಿಖೆ ಘಟನಾ, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಭೇಟಿ, ಪರಿಶೀಲನೆ

ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಹರೆಗೋಡು ಸಮೀಪದ ವಿಜಯ ಗೇರುಬೀಜ ಕಾರ್ಖಾನೆ ಸಮೀಪದ ಮನೆಯಲ್ಲಿ ವಾಸವಿದ್ದ ಮೀನು ಮಾರಾಟದ ಮಹಿಳೆ ಗುಲಾಬಿ(55) ಎಂಬವರ ಅನುಮಾನಾಸ್ಪದ ಸಾವಿನ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಘಟನಾ ಸ್ಥಳಕ್ಕೆ ಭಾನುವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಮಹಿಳೆ ಮನೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆ ಮಾಹಿತಿ ಪಡೆದಿದ್ದು, ಮುಂದಿನ ತನಿಖೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ […]

ಉದ್ಯಮಿ ಕೆ. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು 5 ಸಾಕ್ಷಿಗಳ ಹೇಳಿಕೆ

ಉಡುಪಿ: ಉದ್ಯಮಿ ಕೆ. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು 5 ಸಾಕ್ಷಿಗಳ ಹೇಳಿಕೆ ಹಾಗೂ ವಿಚಾರಣೆ ನಡೆಯಿತು. ಸೋಮವಾರ 10 ಸಾಕ್ಷಿಗಳ ಹೇಳಿಕೆ ಪಡೆಯುವ ಬಗ್ಗೆ ಸಮನ್ಸ್ ನೀಡಿಲಾಗಿತ್ತು. ಆದರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ್ ಎಂ.ಜೋಶಿ ಸಮ್ಮುಖದಲ್ಲಿ 5 ಮಂದಿ ಹೇಳಿಕೆ ಮಾತ್ರವೇ ಪಡೆಯಲಾಯಿತು. ಮಂಗಳವಾರವೂ ಉಳಿದ ಸಾಕ್ಷಿಗಳ ವಿಚಾರಣೆ ನಡೆಯಲಿದೆ. ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ವಿವಿಜ್ಞಾನ ವಿಭಾಗದ ಪ್ರೊ. ಉದಯ ಕುಮಾರ್, ಮೋಟಾರ್ ವಾಹನ ನಿರೀಕ್ಷಕ ಮಾರುತಿ […]

ಜೋಡಿಕೊಲೆ ಆರೋಪಿಗಳನ್ನು ಗಡಿಪಾರು ಮಾಡಿ: ಶವವಿಟ್ಟು ಪ್ರತಿಭಟನೆ

ಕುಂದಾಪುರ: ಭರತ್ ಹಾಗೂ ಯತೀಶ್ ಮೇಲೆ ತಲವಾರಿನಿಂದ ದಾಳಿ ನಡೆಸಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರನ್ನು ಗಡಿಪಾರು ಮಾಡಬೇಕೆಂದು ಕೋಟ ರಾಷ್ಟ್ರೀಯ ಹೆದ್ದಾರಿ ಸಮೀಪ ಇಬ್ಬರ ಶವವಿಟ್ಟು ಭಾನುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು. ಶನಿವಾರ ತಡರಾತ್ರಿ ತಲವಾರು ದಾಳಿಯಿಂದಾಗಿ ಸಾವನ್ನಪ್ಪಿದ ಯತೀಶ್ ಹಾಗೂ ಭರತ್ ಮೃತದೇಹಗಳ ಮರಣೋತ್ತರ ಪರೀಕ್ಷೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆಯಿತು. ಭಾನುವಾರ ಸಂಜೆ ಆಸ್ಪತ್ರೆಯಿಂದ ನೇರವಾಗಿ ಕೋಟ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಇಬ್ಬರ ಶವವಿಟ್ಟು ವಿವಿಧ ಸಂಘ ಸಂಸ್ಥೆಗಳು, ಸ್ನೇಹಿತರು, ಕುಟುಂಬಸ್ಥರು ಪ್ರತಿಭಟನೆ […]