ವಾಮಂಜೂರು: ಜನರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ; ಅಣಬೆ ಫ್ಯಾಕ್ಟರಿ ಮುಚ್ಚಲು ಆದೇಶ
ವಾಮಂಜೂರು: ಇಲ್ಲಿನ ಆಶ್ರಯ ನಗರದ ಬಳಿ ಇರುವ ಅಣಬೆ ಫ್ಯಾಕ್ಟರಿಯಿಂದಾಗಿ ಪರಿಸರ ಮಾಲಿನ್ಯವಾಗುತ್ತಿದ್ದು ಜನರಿಗೆ ಆರೋಗ್ಯ ಸಮಸ್ಯೆಗಳು ಬರುತ್ತಿವೆ ಎಂದು ಸ್ಥಳೀಯರು ನಡೆಸುತ್ತಿದ್ದ ಪ್ರತಿಭಟನೆಗೆ ತಾರ್ಕಿಕ ಅಂತ್ಯ ದೊರೆತಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಣಬೆ ಫ್ಯಾಕ್ಟರಿ ಘಟಕವನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ. ಅಣಬೆ ಫ್ಯಾಕ್ಟರಿಯಿಂದಾಗಿ ದುರ್ವಾಸನೆಯಿಂದ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದ್ದು, ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ಉಂಟಾಗಿದೆ. ಶ್ವಾಸಕೋಶ ತೊಂದರೆ, ತಲೆನೋವು, ವಾಂತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಜನರು ಎದುರಿಸುವಂತಾಗಿದೆ. ಹಾಗಾಗಿ […]