ನನ್ನ ಅಕ್ಕನನ್ನು ಡಿ.ಕೆ. ಶಿವಕುಮಾರ್ ಒತ್ತೆಯಾಳಾಗಿಸಿಕೊಂಡಿದ್ದಾರೆ: ಸಂತ್ರಸ್ತ ಯುವತಿಯ ಸಹೋದರ ಆರೋಪ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನನ್ನ ಅಕ್ಕನನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ ಎಂದು ಸಿಡಿಲೇಡಿಯ ಸಹೋದರ ಆರೋಪಿಸಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ವಿಚಾರವಾಗಿ ಸಿಡಿ ಯುವತಿಯ ಪೋಷಕರು ಇಂದು ಸುದ್ದಿಗೋಷ್ಠಿ ನಡೆಸಿದರು. ನಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ, ಅಧಿಕಾರಿಗಳಿಗೆ ಕೊಟ್ಟಿದ್ದೇವೆ. ಒಬ್ಬ ಹೆಣ್ಣುಮಗಳನ್ನ ಇಟ್ಟುಕೊಂಡು ರಾಜಕಾರಣ ಮಾಡ್ತಿದ್ದಾರೆ ಎಂದು ಸಂತ್ರಸ್ತೆ ಸಹೋದರ ಹೇಳಿದರು. ಮಾರ್ಚ್ 2ರಂದು ಸಿಡಿ ಪ್ರಕರಣದ ಬೆಳಕಿಗೆ ಬಂದಾಗ ನನ್ನ ಅಕ್ಕನ ಜತೆ ಮೊಬೈಲ್ನಲ್ಲಿ ಚರ್ಚಿಸಿದ್ದ ಆಡಿಯೋ ವೈರಲ್ ಆಗಿದೆ. […]