ನಾಲ್ಕು ದಿನಗಳ ಕಾಲ ಮೈಸೂರಿನಲ್ಲಿ ಅಗ್ನಿವೀರ್ ಸೇನಾ ನೇಮಕಾತಿ 14 ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ: ರ‍್ಯಾಲಿಗೆ ಚಾಲನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಈ ರ‍್ಯಾಲಿಯಲ್ಲಿ ಭಾಗವಹಿಸಿರುವ ಅಭ್ಯರ್ಥಿಗಳು ಈಗಾಗಲೇ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರನ್ನು ಅಗ್ನಿವೀರ್ ರ‍್ಯಾಲಿಯಲ್ಲಿ ಮೊದಲ ದಿನ ಕ್ರೀಡಾ ಚಟುವಟಿಕೆ ಹಾಗೂ ಎರಡನೇ ದಿನ ದೈಹಿಕ ಪರೀಕ್ಷೆಗೆ ಒಳಪಡಿಸಲಾಗುವುದು. ಇನ್ನು ರ‍್ಯಾಲಿಗೆ 14 ಜಿಲ್ಲೆಗಳ 1723 ಸೇನಾ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅಗ್ನಿವೀರ್ ನೇಮಕಾತಿ ಅಧಿಕಾರಿ ಗೌರವ್ ತಾಪ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.ಉದ್ಯೋಗಿಕಾಂಕ್ಷಿಗಳಿಗೆ ಭಾರತೀಯ ಸೇನಾ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಲ್ಲಿನ ಚಾಮುಂಡಿ ವಿಹಾರ […]