ಚಾಮರಾಜನಗರ ಕೋವಿಡ್ ಸೋಕಿತರ ಸಾವು ಪ್ರಕರಣ: ಮೈಸೂರು, ಚಾಮರಾಜನಗರ ಡಿಸಿ ಕಚೇರಿ, ಆಸ್ಪತ್ರೆಯ ದಾಖಲೆಗಳನ್ನು ಸೀಜ್ ಮಾಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೋವಿಡ್ ಸೋಂಕಿತರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ, ಚಾಮರಾಜನಗರ ‌ಜಿಲ್ಲಾಧಿಕಾರಿ, ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿನ ಎಲ್ಲಾ ದಾಖಲೆಗಳನ್ನು ತಕ್ಷಣ ಸೀಜ್ ಮಾಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದೆ. ಈ ಬಗ್ಗೆ ಆದೇಶ ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಸೀಜ್ ಮಾಡಿದ‌ ದಾಖಲೆಗಳನ್ನು ಸರ್ಕಾರ ನೇಮಿಸಿದ ತನಿಖಾಧಿಕಾರಿ ಪರಿಶೀಲಿಸಬಹುದು ಎಂದು ಹೇಳಿದ್ದಾರೆ. ಆಕ್ಸಿಜನ್ ಕೊರತೆಯಿಂದ 24 ಕೋವಿಡ್ ಸೋಂಕಿತರು ಸಾವಿಗೀಡಾದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು […]