ಗಜಪಯಣಕ್ಕೂ ಮುನ್ನವೇ ಮೈಸೂರು ದಸರಾ ಆಚರಣೆಗೆ 16 ಉಪಸಮಿತಿ ರಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ,‌ ಅದ್ಧೂರಿ ಆಚರಣೆಗೆ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ 16 ಉಪ ಸಮಿತಿಗಳಿಗೆ ಜಿಲ್ಲೆಯ ಅಧಿಕಾರಿಗಳನ್ನು ನೇಮಿಸಲಾಗಿದೆ.ದಸರಾವನ್ನು ಸಾಂಪ್ರದಾಯಿಕ ಹಾಗೂ ಅದ್ಧೂರಿಯಾಗಿ ನಾಡಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮವನ್ನಾಗಿ ಮಾಡಲು ಸ್ವತಃ ಮೈಸೂರಿನವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ನಂತರ ಮೈಸೂರಿನಲ್ಲಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು ಉಪ ಸಮಿತಿಗಳನ್ನು ರಚಿಸಿ, ಅದಕ್ಕೆ ಉಪ ವಿಶೇಷಾಧಿಕಾರಿಗಳು, […]