ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸುತ್ತಿರುವ ಕಲಾವಿದರು
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ.ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, ಕಂಸಾಳೆ, ನಂದಿಧ್ವಜ, ನಗಾರಿ, ಬುಡಕಟ್ಟು ಮತ್ತು ಜಾನಪದ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಕಾತರದಿಂದ ಕಾಯುತ್ತಿವೆ. ಈ ಹಿನ್ನೆಲೆ ನಾಡಹಬ್ಬ ದಸರಾದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನೇಕ ಕಲಾವಿದರು ಮತ್ತು ಕಲಾ ತಂಡಗಳು ಸಿದ್ಧತೆ ನಡೆಸುತ್ತಿರುವ […]